ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ : 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಪುಟ ಅಸ್ತು

Karnataka Govt Jobs Recruitment 2026

ಬೆಂಗಳೂರು: ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಸುಮಾರು 56,432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಒಂದು ತಿಂಗಳೊಳಗೆ (30 ದಿನಗಳು) ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.

ನೇಮಕಾತಿಗೆ ಗ್ರೀನ್ ಸಿಗ್ನಲ್: ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, “ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆಯನ್ನು ಪುನರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಅಡ್ವೊಕೇಟ್ ಜನರಲ್ ಅವರ ಕಾನೂನು ಸಲಹೆಯಂತೆ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಈ ನೇಮಕಾತಿಗಳು ನಡೆಯಲಿವೆ,” ಎಂದು ತಿಳಿಸಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಮೀಸಲಾತಿ ಗೊಂದಲಕ್ಕೆ ಪರಿಹಾರ:
ಎಸ್‌ಸಿ (SC) ಮತ್ತು ಎಸ್‌ಟಿ (ST) ಮೀಸಲಾತಿ ಹೆಚ್ಚಳದ ವಿಚಾರವಾಗಿ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಈಗ ಸರ್ಕಾರವು ಮಧ್ಯಂತರ ದಾರಿಯೊಂದನ್ನು ಕಂಡುಕೊಂಡಿದೆ:

ಸದ್ಯಕ್ಕೆ ಹಳೆಯ ಮೀಸಲಾತಿ ಪ್ರಮಾಣದ (50%) ಅಡಿಯಲ್ಲೇ ನೇಮಕಾತಿ ನಡೆಯಲಿದೆ.

ಆದರೆ, ಹೆಚ್ಚುವರಿಯಾಗಿ ಎಸ್‌ಸಿಗೆ 2% ಮತ್ತು ಎಸ್‌ಟಿಗೆ 4% ಹುದ್ದೆಗಳನ್ನು ಕಾಯ್ದಿರಿಸಲಾಗುವುದು.

ಇದು ನ್ಯಾಯಾಲಯದ ಅಂತಿಮ ತೀರ್ಪಿನ ಮೇಲೆ ಅವಲಂಬಿತವಾಗಿರುತ್ತದೆ.

ಮುಂದಿನ 30 ದಿನಗಳಲ್ಲಿ ಆಯಾ ಇಲಾಖೆಗಳಿಂದ ಅಧಿಕೃತ ಅಧಿಸೂಚನೆಗಳು ಹೊರಬೀಳಲಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಈ ನಿರ್ಧಾರ ಹೊಸ ಭರವಸೆ ಮೂಡಿಸಿದೆ.

Karnataka Jobs, Govt Recruitment, Cabinet Decision, HK Patil, SC ST Reservation, Job Seekers, Vidhana Soudha.