ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC Exam) ಮತ್ತು ಪಿಯುಸಿ ಪರೀಕ್ಷೆಗಳಿಗೆ (PUC Exam) ಇನ್ನೇನು ಕೆಲವೇ ದಿನಗಳು ಉಳಿದಿದೆ. ಈ ನಡುವೆ ಇಂದು ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ (Press Meet) ನಡೆಸಿ 2026ರ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಮತ್ತು ಇತರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ : ನಂದಿನಿ ಹಾಲು ಕುಡಿಯುವವರಿಗೆ ಗುಡ್ ನ್ಯೂಸ್
ಇದನ್ನು ಮಿಸ್ ಮಾಡದೇ ಓದಿ : ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಮುಂಬೈ ಆಸ್ಪತ್ರೆಗೆ ದಾಖಲು
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಅವರು ತಿಳಿಸಿದರು.
ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ 1,217 ಕೇಂದ್ರಗಳಲ್ಲಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ 2,871 ಕೇಂದ್ರಗಳಲ್ಲಿ ನಡೆಯಲಿದೆ ಅಂತ ಅವರು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ ಪ್ರಕಾರ:
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ:
ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ
Karnataka SSLC, PUC exam time table announced, here is the complete information