ಬೆಂಗಳೂರು : ಜಿಲ್ಲಾ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಆನ್‌ಲೈನ್ ಸೇವಾಸಿಂಧು ತಂತ್ರಾAಶದ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಕ್ರಮ ಸಂಖ್ಯೆ 1 ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಮಿಸ್ ಮಾಡದೇ ಓದಿ : ಶಿವಮೊಗ್ಗ : ಫೆ.21 ರ ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳ
ಇದನ್ನು ಮಿಸ್ ಮಾಡದೇ ಓದಿ : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು
ಆಹಾರವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕುಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ.
ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.

ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.03 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿಯನ್ನು ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶೀ / ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಹೊಂದಾಣಿಕೆಯಾಗಬೇಕು.
ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಹರು. ಅರ್ಜಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ.06 ಕೊನೆಯ ದಿನವಾಗಿದೆ.
Karnataka Vokkaliga Community Development Corporation: Application invited for subsidy