ಕರ್ನಾಟಕ ಹವಾಮಾನ ವರದಿ : ಇನ್ನೆರಡು ದಿನದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಚಳಿ…!

Karnataka Weather Report
Karnataka Weather Report

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ. ಬೀದರ್ 9, ಧಾರವಾಡ 9.6, ವಿಜಯಪುರ 10, ರಾಯಚೂರು 10 ಮತ್ತು ಹಾಸನ ಜಿಲ್ಲೆಯಲ್ಲಿ 11.2 ಡಿ.ಸೆ.,ಬಾಗಲಕೋಟೆ 11.1 ಡಿಗ್ರಿ ಸೆಲ್ಸಿಯಸ್​​, ಬಳ್ಳಾರಿ 13.4 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 10.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 11.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 12.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ದಕ್ಷಿಣ 14.2 ಡಿಗ್ರಿ ಸೆಲ್ಸಿಯಸ್, ಬೀದರ್ 9.3​​ ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ 13.2 ಡಿಗ್ರಿ ಸೆಲ್ಸಿಯಸ್, ಚಿಕ್ಕಬಳ್ಳಾಪುರ 11.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Karnataka Weather Report
Karnataka Weather Report

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಉಷ್ಣಾಂಶ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದ‌ರ್, ಚಿತ್ರದುರ್ಗ, ಧಾರವಾಡ, ಗದಗ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ 2 ರಿಂದ 4 ಡಿ.ಸೆ. ಉಷ್ಣಾಂಶ ಕುಸಿತವಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ: ನಿಮ್ಮ ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಹೊತ್ತು ನಿದ್ರೆ ಮಾಡಬೇಕು ಗೊತ್ತಾ?

ಇದನ್ನು ಮಿಸ್‌ ಮಾಡದೇ ಓದಿ: ಸಂಪಾದಿಸುವ ಪತ್ನಿ ಪತಿಯಿಂದ `ಜೀವನಾಂಶ’ ಪಡೆಯಲು ಅರ್ಹಳಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಇಂದು ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಚಳಿ ಇರಲಿದ್ದು ಅರೆಂಜ್​​ ಅಲರ್ಟ್​​ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ. ಇದಲ್ಲದೇ ಮುಂದಿನ 2 ದಿನಗಳಲ್ಲಿ ಭಾರಿ ಚಳಿ ಇರಲಿದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.

 

Karnataka Weather Report Severe cold in these districts of the state for the next two days.