ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಒಂದು ವಿಶೇಷ ಯೋಜನೆಯನ್ನು ಘೋಷಿಸಿದೆ. ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ, ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿಯನ್ನು ನೀಡಲು ಮುಂದಾಗಿದೆ.
ಯಾರೆಲ್ಲಾ ಅರ್ಜಿ ಸಲ್ಲಿಸಬಹುದು : ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಇಲ್ಲಿವೆ:
ವಯೋಮಿತಿ: 18 ವರ್ಷದಿಂದ 45 ವರ್ಷದೊಳಗಿರಬೇಕು.
ವಿದ್ಯಾರ್ಹತೆ: ಕನಿಷ್ಠ ಎಸ್‌ಎಸ್‌ಎಲ್‌ಸಿ (SSLC) ಪಾಸಾಗಿರಬೇಕು
ತರಬೇತಿಯ ವಿಶೇಷತೆಗಳು:
ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಒದಗಿಸಲಿದೆ. ತರಬೇತಿ ಯಶಸ್ವಿಯಾಗಿ ಮುಗಿದ ನಂತರ, ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಅಧಿಕೃತ ಚಾಲನಾ ಪರವಾನಗಿ (Driving License) ನೀಡಲಾಗುವುದು.
ತರಬೇತಿ ಕೇಂದ್ರಗಳು ಮತ್ತು ದಿನಾಂಕ:
ಈ ತರಬೇತಿಯು 2026ರ ಮಾರ್ಚ್ 23ರಿಂದ ಪ್ರಾರಂಭವಾಗಲಿದೆ. ಮಳವಳ್ಳಿ, ಮಾಲೂರು, ಹಾಸನ, ಚಿಕ್ಕಮಗಳೂರು ಮತ್ತು ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ www.ksrtcjobs.karnataka.gov.in ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ನೇರವಾಗಿ ಹತ್ತಿರದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ನಿಮಗೆ ಯಾವುದೇ ಸಂದೇಹಗಳಿದ್ದಲ್ಲಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:
7760990133 / 7019637406
7760990277 / 7619343405
8904045818 / 9686684655
9902863142 / 7349103222
7019072560 / 9740027655