Legal News | ಡಿಸೆಂಬರ್ 13ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

karnataka high court

ಬೆಂಗಳೂರು: ಕರ್ನಾಟಕ ಉಚ್ಛನ್ಯಾಯಾಲಯದ  ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರಾದ ವಿಭು ಬಕ್ರು, ಕರ್ನಾಟಕ ಉಚ್ಛನ್ಯಾಯಾಲಯದ  ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರು ಆದ ಅನು ಸಿವರಾಮನ್ ಅವರ ನಿರ್ದೇಶನದ ಮೇರೆಗೆ 2025ನೇ ಡಿಸೆಂಬರ್ 13 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ: ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸದರಿ ಲೋಕ್ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಂಬಂಧ, ಪೋಲಿಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತ ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡ ಮೊತ್ತದಲ್ಲಿ ಶೇಕಡಾ 50 ರಷ್ಟು ಸಾರಿಗೆ ಇಲಾಖೆಯು ರಿಯಾಯಿತಿ ನೀಡಿ 2025ನೇ ನವೆಂಬರ್ 21 ರಿಂದ ಡಿಸೆಂಬರ್ 12ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

High Court
High Court

ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

National Lok Adalat across the karnataka state on December 13

RECENT NEWS