ಜ.27 ರಂದು ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

epfo

ಬಳ್ಳಾರಿ : ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ಜ.27 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ಡ್ರೆಸ್ ಸರ್ಕಲ್ ಮಳಿಗೆಯ ಸಭಾಂಗಣದಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಇದನ್ನು ಮಿಸ್‌ ಮಾಡದೇ ಓದಿ : ನವದೆಹಲಿಯಲ್ಲಿ 2.8 ತೀವ್ರತೆಯ ಲಘು ಭೂಕಂಪ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ರಾಜ್ಯದ `PU ಕಾಲೇಜು’ಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಕಾರ್ಯಕ್ರಮದಲ್ಲಿ ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ, ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು.ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್‌ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಸಹ ಒದಗಿಸಲಾಗುತ್ತದೆ. ಹಾಗಾಗಿ ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಜ.27 ರಂದು ನಡೆಯುವ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹನೀಯರ ದಾರ್ಶನಿಕ ಬದುಕುಗಳನ್ನು ತಿಳಿಸುವ ಕಾರ್ಯ ಸರ್ಕಾರ ಮಾಡುತ್ತಿದೆ: ಮೇಯರ್ ಪಿ.ಗಾದೆಪ್ಪ

ಬಳ್ಳಾರಿ :  ಮಹನೀಯರ ಆದರ್ಶ ಬದುಕು, ಅವರ ತತ್ವಗಳನ್ನು ಈಗಿನ ಯುವಜನತೆಗೆ ತಲುಪಿಸಲು ಮತ್ತು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವಲ್ಲಿ ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಯಂತಿ ಕಾರ್ಯಕ್ರಮಗಳು ಸಾಮಾಜಿಕ ಏಕತೆ ಮತ್ತು ಪ್ರಗತಿಯನ್ನು ಸಾಧಿಸಲು ಪ್ರೇರಣೆ ನೀಡುವ ಕಾರ್ಯಕ್ರಮಗಳಾಗಿವೆ. ಹಾಗಾಗಿ ಮಹನೀಯರ ಆದರ್ಶಗಳನ್ನು ಪಾಲಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದಾಗ ಮಾತ್ರ ಮಹನೀಯರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಕನ್ನಡದಲ್ಲಿ ಸರ್ವಜ್ಞ ಮತ್ತು ತಮಿಳಿನಲ್ಲಿ ತಿರುವಳ್ಳುವರ್ ಅವರಂತೆ ತೆಲುಗಿನಲ್ಲಿ ಶ್ರೇಷ್ಠ ಮತ್ತು ಮಹಾಕವಿ ಎಂದರೆÀ ಮಹಾಯೋಗಿ ವೇಮನರು. ಜನಸಾಮಾನ್ಯರ ಕವಿ, ಜೀವಕಾರುಣ್ಯದ ಕವಿ, ಲೋಕಕ್ಕೆ ಮಾರ್ಗದರ್ಶಿಯಾಗಿದ್ದ ಮತ್ತು ತಮ್ಮ ಜೀವಿತಾವಧಿಯ ಕಾಲಘಟ್ಟದಲ್ಲಿ ಜಾತೀಯತೆ, ಅಂಧಶ್ರದ್ಧೆ, ಮೇಲುಕೀಳುಗಳನ್ನು ತಮ್ಮ ಪದ್ಯಗಳ ಮೂಲಕ ಧಿಕ್ಕರಿಸಿದವರು ಮಹಾಯೋಗಿ ವೇಮನರು ಎಂದು ಹೇಳಿದರು.

Government is working to inform the visionary lives of gentlemen Mayor P. Gadappa
Government is working to inform the visionary lives of gentlemen Mayor P. Gadappa

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮಲಪನಗುಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶೇಖರ ಗಿರಡ್ಡಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ವೇಮನರು ಆಂಧ್ರಪ್ರದೇಶದ ಮೂಗಚಿಪಲ್ಲಿಯ ಕೋಮಗಿರಿ ವೇಮ ಭೂಪಾಲ ಮತ್ತು ಮಲ್ಲಮಾಂಬೆ ಎಂಬ ದಂಪತಿಯ ಮಗನಾಗಿ ಜನಿಸಿದರು. 1412- 1480ರ ನಡುವೆ ಅಂದಾಜು 68 ವರ್ಷ ಬದುಕಿದ್ದ ವೇಮನ ಮಹಾಕವಿ, ಜೀವನವೆಂಬ ಸಂತೆಯೊಳಗಿದ್ದುಕೊAಡೇ ಸಂತರಾಗಿ, ಮಹಾಂತರಾಗಿ ಬೆಳೆದವರು. 15ನೇ ಶತಮಾನದ ತೆಲುಗು ಭಾಷೆಯ ಅನುಭವಿ ವಚನಕಾರ ಮತ್ತು ಸಮಾಜ ಸುಧಾರಕರಾಗಿದ್ದರು ಎಂದರು.

ನಾಡಿನ ತುಂಬೆಲ್ಲ ಸಂಚರಿಸಿ, ಲೋಕಜ್ಞಾನವನ್ನು ಹರಡುವ ಮೂಲಕ ತಮ್ಮ ಸಾಧನೆಯಿಂದ ಮಹಾಯೋಗಿಯಾಗುತ್ತಾರೆ. ಯೌವ್ವನದ ಆರಂಭದ ದಿನಗಳಲ್ಲಿ ಸ್ವೇಚ್ಛಾಜೀವನ ನಡೆಸುತ್ತಿದ್ದ ವೇಮನರು ಜ್ಞಾನೋದಯ ಪಡೆದು ದಾರ್ಶನಿಕ ಕವಿ, ಅನುಭವಿಯಾಗಿ ರೂಪುಗೊಂಡರು ಎಂದು ತಿಳಿಸಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂವಿಧಾನ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕು.ನಿಹಾರಿಕಾ.ಇ ಅವರು ಭರತನಾಟ್ಯ ಪ್ರದರ್ಶಿಸಿದರೆ, ವಿದ್ಯಾರ್ಥಿನಿ ಹಿಮಬಿಂದು ಅವರು ಗಾಂಧಾರಿ ಕಲೆ ಪ್ರದರ್ಶಿಸಿ, ಸಾರ್ವಜನಿಕರ ಚಪ್ಪಾಳೆ ಗಿಟ್ಟಿಸಿಕೊಂಡರು. ದೊಡ್ಡಬಸಪ್ಪ ಗವಾಯಿ ತಂಡ ಭಕ್ತಿ ಸಂಗೀತ ಹಾಗೂ ವೇಮನ ಪದ್ಯಗಳನ್ನು ಗಾಯನದ ಮೂಲಕ ಪ್ರಸ್ತುತಪಡಿಸಿದರು.

ಮಹಾಯೋಗಿ ವೇಮನ ಜಯಂತಿ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆಗೈಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ರೆಡ್ಡಿ ಜನ ಸಂಘ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ- ರೈಲ್ವೇ ನಿಲ್ದಾಣ ರಸ್ತೆ- ಹಳೆ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ- ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ನಡೆಯಿತು.

ಈ ವೇಳೆ ಬಳ್ಳಾರಿ ರೆಡ್ಡಿ ಜನ ಸಂಘ(ರಿ)ದ ಜಿಲ್ಲಾಧ್ಯಕ್ಷ ಎನ್.ಪ್ರತಾಪ್ ರೆಡ್ಡಿ, ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ ಶಾಷಾವಲಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

On 27th Jan Nidhi Apke Neetra program