ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

karnataka one centre

ಶಿವಮೊಗ್ಗ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸಿಸಿ, ಭದ್ರಾವತಿ ಸಿಎಂಸಿ, ಸಾಗರ ಸಿಎಂಸಿ ಮತ್ತು ಸೊರಬ ಟಿಎಂಸಿ ಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ನಂದಿನಿ ಹಾಲು ಕುಡಿಯುವವರಿಗೆ ಗುಡ್‌ ನ್ಯೂಸ್‌: ಶೇ 100% ಸುರಕ್ಷಿತ ‘ಸುಳ್ಳು’ ಹೇಳಿಕೆಗಳನ್ನು ತಳ್ಳಿಹಾಕಿದ KMF

ಆಸಕ್ತಿ ಇರುವ ಅಭ್ಯರ್ಥಿಗಳು https://www.karnatakaone.gov.in / public/Franchisee Terms ರ ಮೂಲಕ ಮಾ. 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗೆ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬದ ವಾರ್ಷಿಕ ವರಮಾನ 3.00 ಲಕ್ಷಗಳ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರು ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.

ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhukarnataka.gov.in ನ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳ ಮೂಲಕ ಆನ್‌ಲೈನ್ ಮೂಲಕ ಮಾರ್ಚ್ 8 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದರೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://ambigaradevelopment.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ಥೆ, ಕೆ.ಇ.ಬಿ. ಸರ್ಕಲ್ ಹತ್ತಿರ,ಶಿವಮೊಗ್ಗ. ದೂ,ಸಂ: 08182-229634 ನ್ನು ಸಂಪರ್ಕಿಸುವುದು.

Online applications invited for Karnataka One centers