ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ.
ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ನೆಲೆಸಿರುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ನೀಡಲಾಗಿದೆ. ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ಇದರಿಂದಾಗಿ ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಮತ್ತು 199ಸಿ ಸೇರಿಸಿ ಏ.7ರಂದು ಅಧಿಸೂಚನೆ ಹೊರಡಿಸಿದೆ. ಇದರನ್ವಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕ) ನಿಯಮ-2025ನ್ನು ರೂಪಿಸಿದೆ.

ಹೊಸ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳ ಬಗ್ಗೆ ನಿಯಮಗಳಲ್ಲಿ ತಿಳಿಸಲಾಗಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ. ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿ, ಕಾಲಾವಧಿ, ಅಪೀಲು ಹೀಗೆ ಪ್ರತಿಯೊಂದು ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ವಿವರಿಸಲಾಗಿದೆ.
ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, -ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ.
ಇ-ಸ್ವತ್ತು ಪಡೆಯಲು ನೀಡಬೇಕಾದ ದಾಖಲಾತಿಗಳು
- ಋಣಭಾರ ಪ್ರಮಾಣ ಪತ್ರ (ನಮೂನೆ-15)
- ಸೇಲ್ ಡೀಡ್ / ಸ್ವತ್ತಿನ ಕಾರ್ಡ್ / ಪಿತ್ರಾರ್ಜಿತ ಆಸ್ತಿ/ ಆಸ್ತಿ ವಿಭಜನೆ / ಗಿಫ್ಟ್ ಡೀಡ್ / ವಿಲ್ / ಹಕ್ಕುಪತ್ರ / ರಿಲೀಜ್ ಡೀಡ್ / ವರ್ಗಾವಣೆ / ಸೆಟ್ಸ್‌ಮೆಂಟ್ / ನ್ಯಾಯಾಲಯದ ಆದೇಶ / ಒಟ್ಟುಗೂಡಿಸು / ವಿಭಾಗ ಪತ್ರ / ಅದಲು ಬದಲು / ಇತರೆ ನೋಂದಾಯಿತ ಪತ್ರ (ನಮೂದಿಸು)
- ಹಕ್ಕುಪತ್ರ
- ಭೂ ಪರಿವರ್ತಿತ ದಾಖಲಾತಿಗಳು.
- ಅನುಮೋದಿತ ಬಡಾವಣೆ ನಕ್ಷೆ/ ಏಕನಿವೇಶನ ನಕ್ಷೆ (ಭೂ ಪರಿವರ್ತನೆಯಾದ)
- ಕರ್ನಾಟಕ ಭೂ ಕಂದಾಯ ಕಾಯಿದೆ 164 ರ ಸೆಕ್ಷನ್ 94 ಸಿ ಅಡಿ ವಿತರಿಸಿದ ಹಕ್ಕು ಪತ್ರ
- ಕಟ್ಟಡವಾಗಿದ್ದಲ್ಲಿ ವಿದ್ಯುತ್ ರಸೀದಿ
- ಕಂದಯ ಪಾವತಿ ರಸೀದಿ
- ಆಧಾರ್ ಹೊರತುಪಡಿಸಿ ಗುರುತಿನ ಚೀಟಿ(ಮತದಾರರ ಗುರುತಿನ ಚೀಟಿ ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಇತ್ಯಾದಿ)
- ಆಸ್ತಿಯೊಂದಿಗೆ ನಿಂತು ತೆಗೆಸಿದ ಛಾಯಾಚಿತ್ರ.
- ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
- ಪೌತಿ ಸಂಬಂಧ ಕರನಿರ್ಧರಣೆ ಪಟ್ಟಿ ಬದಲಾವಣೆಯಾಗಿದ್ದಲ್ಲಿ ವಂಶವೃಕ್ಷ ಹಾಗೂ ಮರಣ ಪ್ರಮಾಣ ಪತ್ರ
Owners of state ‘property’ note: These 12 documents are mandatory to get ‘e-property’.












Follow Me