ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ “ವಿಶೇಷ ನೋಂದಣಿ ಅಭಿಯಾನ”

Pradhan Mantri Shram Yogi Maandhan Yojana

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ. 

ಇದನ್ನು ಮಿಸ್‌ ಮಾಡದೇ ಓದಿ : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಚೇರಿ ಕರ್ತವ್ಯ ವೇಳೆ’ ಈ ನಿಯಮಗಳ ಪಾಲನೆ ಕಡ್ಡಾಯ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : `ಇರಾನ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಕಠಿಣ ಕ್ರಮ : ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ

18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.

Pradhan Mantri Shram Yogi Maandhan Yojana
Pradhan Mantri Shram Yogi Maandhan Yojana

ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Pradhan Mantri Shram Yogi Maandhan Yojana