ಬೆಂಗಳೂರು: ಭಾರತ ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನ್ವಯ ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡಲು 5 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಹನಿ ಹಾಕುವ ಸಲುವಾಗಿ ದೇಶದಾದ್ಯಂತ ಡಿಸೆಂಬರ್ 21 ರಂದು ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಲಸಿಕಾ ದಿನವನ್ನು ನಡೆಸಲು ಭಾರತ ಸರ್ಕಾರವು ನಡೆಸಲು ತಿಳಿಸಿರುವುದರಿಂದ ರಾಜ್ಯದಾದ್ಯಂತ ಕೂಡ ಅಂದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ.
ಅವರು ಇಂದು ವಿವಿಧ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಈ ಬಗ್ಗೆ ತಿಳಿಸಿದರು. ಈ ವರ್ಷ 64 ಲಕ್ಷ ಮಕ್ಕಳಿಗೆ ರಾಜ್ಯದಾದ್ಯಂತ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಪೋಲಿಯೋ ಪೀಡಿತ ಮಕ್ಕಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಕೊಡಗು, ಕೋಲಾರ, ತುಮಕೂರು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಗದಗ, ಬೆಳಗಾವಿ ಮತ್ತು ಬಿಬಿಎಂಪಿ ಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಲಸಿಕೆಯನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹಾಗೆಯೇ ಬೂತ್ ಗಳಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳಿರುವಂತೆ ನೋಡಿಕೊಳ್ಳುವಂತೆ ಮತ್ತು ಕೆಲಸ ಅರಸಿ ವಲಸೆ ಹೋಗಿರುವಂತಹ ಸ್ಥಳಗಳಲ್ಲಿ ಹೆಚ್ಚು ಬೂತ್ ಗಳನ್ನು ತೆರೆಯುವ ಮೂಲಕ ಯಾವ ಮಕ್ಕಳು ಇದರಿಂದ ತಪ್ಪಿಹೋಗದಂತೆ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕು ಮತ್ತು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆಯನ್ನು ಹಾಕಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಶಿಕ್ಷಣ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಹಮ್ಮಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಡಿಸೆಂಬರ್ 21 ರ ಭಾನುವಾರದಂದು ಬಿಓಪಿವಿ ಲಸಿಕೆಯನ್ನು ಬಳಸಿ ಒಂದು ಸುತ್ತಿನ ಪಲ್ಸ್ ಪೆÇೀಲಿಯೊ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. . ಮೊದಲನೇ ದಿನ, ಅಂದರೆ 21 ರಂದು ಪೋಲಿಯೋ ಬೂತ್ ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಮಕ್ಕಳಿಗೆ ವಿಶೇಷವಾಗಿ ವಲಸಿಗ ಸಮುದಾಯದ ಹಾಗೂ ಹೆಚ್ಚು ಅಪಾಯದಂಚಿನಲ್ಲಿರುವ ಸ್ಲಂ ನಂತಹ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ಮೇಲೆ ಪೋಲಿಯೋ ಲಸಿಕೆಯನ್ನು ನೀಡುವಂತೆ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು
Pulse polio vaccination program across the state on December 21st













Follow Me