ದಿವಾಳಿಯಾದ ರಾಜ್ಯ ಸರ್ಕಾರಕ್ಕೆ ಸಂಬಳ ನೀಡಲೂ ಹಣವಿಲ್ಲ ಆರ್. ಅಶೋಕ್

R. Ashoka

ಬೆಂಗಳೂರು : ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಭುಗಿಲೆದ್ದಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಮಿಸ್‌ ಮಾಡದೇ ಓದಿ : ತಿರುಪತಿಯಲ್ಲಿ ಇನ್ಮುಂದೆ ಅನ್ಯಧರ್ಮೀಯರಿಗೆ ಡಿಕ್ಲರೇಷನ್ ಕಡ್ಡಾಯ!

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಗ್ರಾಹಕರಿಗೆ ಬಿಗ್ ರಿಲೀಫ್ : ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ! ಇಂದಿನ ಲೇಟೆಸ್ಟ್ ದರ ಇಲ್ಲಿದೆ

ಅಧಿಕಾರದ ಕಚ್ಚಾಟದಲ್ಲಿ ಯುವಕರ ಭವಿಷ್ಯ ಬಲಿ : ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾತನಾಡಿದ ಆರ್. ಅಶೋಕ್, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಒಬ್ಬನೇ ಒಬ್ಬ ನಿರುದ್ಯೋಗಿಗೂ ಕೆಲಸ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಅಧಿಕಾರದ ಕುರ್ಚಿಗಾಗಿ ಕಚ್ಚಾಟ ನಡೆಸುತ್ತಿದ್ದಾರೆ. ಇವರ ರಾಜಕೀಯ ಜಿದ್ದಾಜಿದ್ದಿಯಲ್ಲಿ ರಾಜ್ಯದ ಯುವಕರ ಭವಿಷ್ಯ ಬಲಿಯಾಗುತ್ತಿದೆ ಎಂದು ಕಿಡಿಕಾರಿದರು.

Huge battle of job seekers in Dharwad Thousands of students protest by holding photos of Congress leaders
Huge battle of job seekers in Dharwad Thousands of students protest by holding photos of Congress leaders

ರಾಜ್ಯ ಸರ್ಕಾರ ದಿವಾಳಿಯಾಗಿದೆ, ಗಂಭೀರ ಆರೋಪ : ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಖಜಾನೆಯಲ್ಲಿ ಹಣವಿಲ್ಲದಂತಾಗಿದೆ. ಇನ್ನು ಹೊಸ ನೇಮಕಾತಿ ಹೇಗೆ ಮಾಡುತ್ತಾರೆ?” ಎಂದು ಪ್ರಶ್ನಿಸಿದರು.

ನೇಮಕಾತಿ ವಿಳಂಬದ ಪ್ರಮುಖ ಅಂಶಗಳು:

ಖಾಲಿ ಹುದ್ದೆಗಳು: ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ.

ಆದೇಶಕ್ಕೆ ಬೆಲೆಯಿಲ್ಲ: ಹಣಕಾಸು ಇಲಾಖೆಯು 65,000 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿ ಆರು ತಿಂಗಳು ಕಳೆದರೂ, ಈವರೆಗೆ ಒಂದೇ ಒಂದು ಸಂದರ್ಶನ ನಡೆದಿಲ್ಲ.

ಆಗ್ರಹ: ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಅಧಿಸೂಚನೆ ಹೊರಡಿಸಬೇಕು. ನೇಮಕಾತಿ ವಿಳಂಬದಿಂದಾಗಿ ವಯೋಮಿತಿ ಮೀರುತ್ತಿರುವ ಆತಂಕದಲ್ಲಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.