ಬೆಳಗಾವಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ.

ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಿಸುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ರವರ ಚುಕ್ಕೆ ಗುರುತಿನ ಪ್ರಶ್ನೆ 621ಗೆ ಉತ್ತರಿಸಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು, ಮುಂದಿನ ಆಯವ್ಯಯದಲ್ಲಿ ಒಳಪಡಿಸಲು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
Reservation for athletes in police and forest departments: CM Siddaramaiah announces












Follow Me