ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಖ್ಯಾತ ಚಿತ್ರ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ. ಆ ಮೂಲಕ ಖ್ಯಾತ ಕನ್ನಡದ ಚಲನಚಿತ್ರ ನಿರ್ದೇಶಕ ಜೋ ಸೈಮನ್ ಇನ್ನಿಲ್ಲವಾಗಿದ್ದಾರೆ.
ಇಂದು ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರು ಹೃದಯಾಘಾತದಿಂದ ದಿಢೀರ್ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇಂದು ಫಿಲ್ಮಂ ಚೇಂಬರ್ ನಲ್ಲಿ ನಡೆದಂತ ಸಭೆಯಲ್ಲಿ ಭಾಗವಹಿಸಿದ್ದಂತ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೃತ ಸ್ಯಾಂಡಲ್ ವುಡ್ ನಿರ್ದೇಶಕ ಜೋ ಸೈಮನ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋಸೈಮನ್ ಅವರು ಸಾಹಸ ಸಿಂಹ, ಬಂಗಾರದ ಗುಡಿ ಸಿನಿಮಾ ಸೇರಿದಂತೆ ಹತ್ತಾರು ಯಶಸ್ವಿ ಸಿನಿಮಾಗಳ ನಿರ್ದೇಶಕರು. ಫಿಲಂ ಚೇಂಬರ್ ನಲ್ಲಿ ಸಭೆ ನಡೆಸುವಾಗ ಜೋಸೈಮನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಜೋ ಸೈಮನ್ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತುಮ ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ, ಸಂಜೆ 4.30 ರ ಸುಮಾರಿಗೆ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ನಿರ್ದೇಶನದ ಹೊರತಾಗಿ, ಜೋ ಸೈಮನ್ ಕನ್ನಡ ಚಲನಚಿತ್ರೋದ್ಯಮದಲ್ಲಿ ನಟ, ಗೀತರಚನೆಕಾರ ಮತ್ತು ಚಿತ್ರಕಥೆ ಬರಹಗಾರರಾಗಿಯೂ ಹೆಸರುವಾಸಿಯಾಗಿದ್ದರು. ಸಿನಿಮಾಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅವರಿಗೆ 2013 ರಲ್ಲಿ ಬಿ.ಆರ್. ಪಂಥುಲು ಪ್ರಶಸ್ತಿಯನ್ನು ನೀಡಿ ಗೌರವಿಸಿತು.
Film director Joe Simon dies of heart attack