Shivamogga | ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Application i
Application i

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಇದನ್ನು ಮಿಸ್‌ ಮಾಡದೇ ಓದಿ: ಬಿ.ಇಡಿ ವ್ಯಾಸಂಗ ಮಾಡುತ್ತಿರುವರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಇದನ್ನು ಮಿಸ್‌ ಮಾಡದೇ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಈ ದಿನದಿಂದಲೇ 8ನೇ ವೇತನ ಆಯೋಗ ಜಾರಿ..!

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಡಿ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

puc board karnataka

Service attitude among doctors is rare in free health camp: Correspondent R Maruti Ingita
Service attitude among doctors is rare in free health camp: Correspondent R Maruti Ingita

ಶಿವಮೊಗ್ಗ: ಆಸ್ಪತ್ರೆಗಳು ಪ್ರಸ್ತುತ ದಿನಮಾನಗಳಲ್ಲಿ ವಾಣಿಜ್ಯ ಕೇಂದ್ರಗಳಾಗಿ ಮಾರ್ಪಟ್ಟಿದ್ದು, ವೈದ್ಯರುಗಳಲ್ಲಿ ಸೇವಾ ಮನೋಭಾವನೆ ಕಡಿಮೆಯಾಗಿದೆ ಎಂದು ವಾರ್ತಾಧಿಕಾರಿ ಆರ್ ಮಾರುತಿ ತಿಳಿಸಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ತೃಪ್ತಿ ಹಾಸ್ಪಿಟಲ್ ಇವರ ಸಂಯುಕ್ತ ಆಶ್ರಯದಲ್ಲಿ ತೃಪ್ತಿ ಆಸ್ಪತ್ರೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತೃಪ್ತಿ ಆಸ್ಪತ್ರೆಯ ವೈದ್ಯ ಡಾ.ಚಂದ್ರಶೇಖರ್ ಅವರು ಸೇವಾ ಮನೋಭಾವದಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುತ್ತಿರವುದು ಸಮಾಜಕ್ಕೆ ನೀಡುತ್ತಿರುವು ಬಹುದೊಡ್ಡ ಕೊಡುಗೆಯಾಗಿದೆ ಎಂದರು.

ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ಇರುವವರಿಗೆ ಮಾತ್ರ ಇಂತಹ ಕಾರ್ಯಗಳನ್ನು ನಡೆಸಲು ಸಮಯ ಸಿಗುತ್ತದೆ ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದ್ದು, ಆರೋಗ್ಯದ ಬಗ್ಗೆ ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದ ಅವರು, ದೇಹದ ಭಾಗಗಳಲ್ಲಿ ಮುಖ್ಯವಾಗಿರುವ ಮೂತ್ರಕೋಶ, ಲಿವರ್, ಹೃದಯ ಇವುಗಳ ತಪಾಸಣೆಗೆ ಇತರೆ ಆಸ್ಪತ್ರೆಗಳಲ್ಲಿ ಸಾಕಷ್ಟು ಹಣ ಪಾವತಿ ಮಾಡಬೇಕಾಗುತ್ತದೆ. ಆದರೆ ತೃಪ್ತಿ ಆಸ್ಪತ್ರೆ ಇವುಗಳ ತಪಾಸಣೆಯನ್ನು ಉಚಿತವಾಗಿ ನಡೆಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದು ಹೇಳಿದರು.

ಆಸ್ಪತ್ರೆಯ ವೈದ್ಯ ಡಾ.ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಕನಸಾಗಿದೆ. ಈ ನಿಟ್ಟಿನಲ್ಲಿ ಉಚಿತ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡಿದ್ದೇನೆ. ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಆದ್ದರಿಂದ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ದೊರಕಿಸಿ ಕೊಡುವುದು ನನ್ನ ಮೊದಲ ಆಧ್ಯತೆಯಾಗಿದೆ. ಕಿಡ್ನಿ, ಲಿವರ್ ಹಾಗೂ ಹೃದಯದ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಆರೋಗ್ಯವಾಗಿರುತ್ತಾನೆ. ಇವುಗಳು ಉತ್ತಮವಾಗಿರಬೇಕಾದರೆ ಮಿತವಾದ ಆಹಾರ, ವ್ಯಾಯಾಮ ಮತ್ತು ನಡಿಗೆಯನ್ನು ಮಾಡಲೇಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಹೊನ್ನಾಳಿ ಚಂದ್ರಶೇಖರ್, ಗೋ.ವಾ.ಮೋಹನಕೃಷ್ಣ ಮತ್ತಿತರರಿದ್ದರು.