ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ

heatwave

ಬೆಂಗಳೂರು : ಈ ಬಾರಿಯ ಬೇಸಿಗೆಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಮಾರ್ಚ್ನಿಂದ ಮೇವರೆಗೆ ತಾಪಮಾನ ಸಾಮಾನ್ಯಕ್ಕಿಂತ ಕಠಿಣವಾಗಿರಲಿದೆ. ಕಡಿಮೆ ಶಾಖದ ಅಲೆ ಮತ್ತು ಬೆಚ್ಚಗಿನ ರಾತ್ರಿ ಇರಲಿದೆ. ಮಾರ್ಚ್ ಆರಂಭದಲ್ಲೇ ಬಿಸಿಲಿನ ತೀವ್ರತೆ ಹೆಚ್ಚಳವಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ಶೇ.65 ಹೆಚ್ಚಲಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಬೆಂಗಳೂರು, ವಿಜಯಪುರು, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಸೇರಿ ಉ.ಕರ್ನಾಟಕದ ಜಿಲ್ಲೆಗಳಲ್ಲಿ 43 ಡಿ.ಸೆ., ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ, ತುಮಕೂರು, ಬೆಂ.ದಕ್ಷಿಣ, ಬೆಂ. ಗ್ರಾಮಾಂತರದಲ್ಲಿ 40 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ.

ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಏನು ಮಾಡಬೇಕು : ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತçದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು.

ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ. ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ದ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಬೇಕು.

ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದ್ದಲ್ಲಿ, ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿರಿ. ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲಕೆತ್ತಿ ಆರೈಕೆ ಮಾಡಿ. ಆತ/ಆಕೆಯ ಹಣೆ, ಕತ್ತು, ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬೇಡಿ) ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀರ್ವ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲವೇ 104ಕ್ಕೆ ಕರೆ ಮಾಡಬೇಕು.

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸಿದ ನೀರು ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಬೇಕು ಎಂದು ಅವರು ತಿಳಿಸಿದ್ದಾರೆ.

ಕೈಗಳನ್ನು ಸಾಬೂನು ಮತ್ತು ನೀರಿನಿಂದ 45 ಸೆಕೆಂಡ್ಗಳ ಕಾಲ ತೊಳೆದ ನಂತರ ಆಹಾರ ಸೇವಿಸಬೇಕು. ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಮಲ, ಮೂತ್ರ ವಿಸರ್ಜನೆಗಾಗಿ ಶೌಚಾಲಯ ಬಳಸಬೇಕು. ಸುರಕ್ಷಿತ ಆಹಾರ ಮಾತ್ರ ಸೇವಿಸಿ, ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರಕ್ಕೆ ಆದ್ಯತೆ ನೀಡಿ.

ಏನು ಮಾಡಬಾರದು : ಬಿಗಿಯಾದ, ಗಾಢ ಬಣ್ಣದ, ಸಿಂಥೆಟಿಕ್ ಬಟ್ಟೆ ಧರಿಸಬಾರದು. ಕುಷನ್ಯುಕ್ತ ಕುರ್ಚಿಯಲ್ಲಿ ಕೂಡಬಾರದು. ಸೋಡಾ ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನಿಯಗಳನ್ನು ಕುಡಿಯಬೇಡಿ (ಬಾಯಾರಿಕೆಯಾದಾಗÀ ಕಡ್ಡಾಯವಾಗಿ ನೀರು ಕುಡಿಯಬೇಕು). ಬೆವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬಾರದು. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು. ಮಾಂಸಹಾರ ಸೇವನೆ ಮತ್ತು ಮಧ್ಯಪಾನ ವರ್ಜಿಸಿಬೇಕು.

ಬಿಗಿಯಾದ ಗಾಳಿಯಾಡದ ಪಾದರಕ್ಷೆ ಅಥವಾ ಶೂ ಧರಿಸಬೇಡಿ. ಉಷ್ಣತೆಯಿಂದ ಸುಸ್ತಾದಾಗ ತುಂಬಾ ತಣ್ಣಗಿನ ಅಥವಾ ಶೀತಲೀಕರಿಸಿದ ನೀರಿನಿಂದ ಒರೆಸಿಕೊಳ್ಳಬೇಡಿ (ಇದರಿಂದ ದೇಹದ ಹೊರಪದರದಲ್ಲಿನ ರಕ್ತನಾಳಗಳು ಸಂಕುಚಿತಗೊAಡು ದೇಹದ ಒಳಗಿನ ಉಷ್ಣತೆ ದೇಹದೊಳಗೆ ಬಂಧಿತವಾಗಿ ಅಂಗಾಂಗಗಳು ನಿಷ್ಕ್ರಿಯಗೊಂಡು ಹೆಚ್ಚಿನ ಹಾನಿಯಾಗುವ ಸಂಭವವಿರುತ್ತದೆ).

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ನೀರನ್ನು ಮತ್ತು ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬಾರದು. ಕೈಗಳನ್ನು ತೊಳೆದುಕೊಳ್ಳದೇ ಆಹಾರವನ್ನು ಸೇವಿಸಬೇಡಿ, ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಬಯಲು ಪ್ರದೇಶಗಳಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಬಾರದು. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು. ತಯಾರಿಸಿದ ಆಹಾರವನ್ನು ಮುಚ್ಚಳದಿಂದ ಮುಚ್ಚಬೇಕು.

ಶಾಖಾಘಾತದ ಲಕ್ಷಣಗಳು : ಅತಿಹೆಚ್ಚು ಬಿಸಿಲಿನ ತಾಪಮಾನದಿಂದ ಮನುಷ್ಯನು ಶಾಖಾಘಾತಕ್ಕೆ ಒಳಗಾಗುವ ಸಂಭವವಿರುತ್ತದೆ. ಅದರಲ್ಲಿ ಮುಖ್ಯವಾಗಿ ಸಂಭ್ರಾAತಿ, ಅಸಂಗತ ಮಾತು, ವ್ಯತ್ಯಸ್ಥ ಪ್ರಜ್ಞೆ ಶಾಖಾಘಾತದ ಲಕ್ಷಣಗಳಾಗಿವೆ.

ಶಾಖಾಘಾತಕ್ಕೆ ಚಿಕಿತ್ಸೆ : ಮನುಷ್ಯನು ಬಿಸಿಲಿನ ಬೇಗೆಯಿಂದ ಶಾಖಾಘಾತಕ್ಕೊಳಗದಾಗ ನೆರಳಿರುವೆಡೆಗೆ ಸ್ಥಳಾಂತರಿಸಬೇಕು. ವ್ಯಕ್ತಿಯ ವಸ್ತçಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಿ, ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಬೇಕು. ಇಲ್ಲವೇ ಹತ್ತಿರದ ವೈದ್ಯರನ್ನು ಕರೆಸಬೇಕು.

Severe heatwave across the state this summer: Public urged to take precautions