ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.
ಮಧ್ಯಾಹ್ನ 12.30ಕ್ಕೆ ಪಿ.ಜೆ.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಸಂಜೆ 4.30ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ : ರಾಜ್ಯ ಸರ್ಕಾರ ಆದೇಶ
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಾಮನೂರು ಶಿವಶಂಕರಪ್ಪ, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರು,, ಇವರು ದಿನಾಂಕ:14.12.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.
ಮಧ್ಯಾಹ್ನ 12.30ಕ್ಕೆ ಪಿ.ಜೆ.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಸಂಜೆ 4.30ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು.
ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ಜೂನ್.16, 1931ರಲ್ಲಿ ದಾವಣಗೆರೆಯಲ್ಲಿ ಜನಿಸಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಇದೀಗ ಶಾಮನೂರು ಶಿವಶಂಕರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.












Follow Me