ಶಿವಮೊಗ್ಗ : ಅಂಗನವಾಡಿ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ಗುರುತಿಸಲು ಡಿಸಿ ಸೂಚನೆ

Shivamogga DC instructs Anganwadi to identify site for construction of own buildings

ಶಿವಮೊಗ್ಗ : ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮನ್ವಯ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಜಿಲ್ಲೆಯಲ್ಲಿ ಒಟ್ಟು 2563 ಅಂಗನವಾಡಿ ಕೇಂದ್ರಗಳಿದ್ದು 2065 ಸ್ವಂತ ಕಟ್ಟಡದಲ್ಲಿ, 106 ಶಾಲಾ ಕಟ್ಟಡದಲ್ಲಿ, 96 ಇತರೆ ಕಟ್ಟಡದಲ್ಲಿ ಮತ್ತು 296 ಬಾಡಿಗೆ ಕಟ್ಟಡದಲ್ಲಿವೆ. ನಗರದಲ್ಲಿ 180 ಮತ್ತು ಗ್ರಾಮೀಣ ಭಾಗದಲ್ಲಿ 70 ನಿವೇಶನಗಳ ಅವಶ್ಯಕತೆ ಇದ್ದು, ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ವಹಿಸಬೇಕು. ಶಿವಮೊಗ್ಗ ನಗರದಲ್ಲಿ ಆದ್ಯತೆ ಮೇಲೆ ನಿವೇಶನ ಗುರುತಿಸುವ ಕೆಲಸವಾಗಬೇಕು ಎಂದು ಸಿಡಿಪಿಓ ಗಳಿಗೆ ಸೂಚಿಸಿದರು.ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಏಳು ತಾಲ್ಲೂಕಿಗಳಿಗೆ ಮಂಜೂರಾಗಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006 ರಡಿ ಕಳೆದ ತ್ರೆöÊಮಾಸಿಕದಲ್ಲಿ 83 ಪ್ರಕರಣ ದಾಖಲಾಗಿದ್ದು ಹಿಂದಿನ ಬಾಕಿ ಸೇರಿದಂತೆ 123 ಪ್ರಕರಣಗಳ ಪೈಕಿ 61 ಇತ್ಯರ್ಥಗೊಂಡಿವೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ 34 ಮತ್ತು ನ್ಯಾಯಾಲಯದಲ್ಲಿ 28 ಪ್ರಕರಣ ಬಾಕಿ ಇದ್ದು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿದ ಅವರು ಆಪ್ತಸಮಾಲೋಚನೆ ಮತ್ತಿತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಸಂತ್ರಸ್ತರಿಗೆ ನೀಡಬೇಕೆಂದು ತಿಳಿಸಿದರು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಖಿ ಒನ್ ಸ್ಟಾಪ್ ಸೆಂಟರ್‌ನಡಿ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ತಾತ್ಕಾಲಿಕ ಆಶ್ರಯ ವ್ಯವಸ್ಥೆ ನೀಡಲಾಗುತ್ತದೆ. ಪ್ರಸ್ತುತ 177 ಪ್ರಕರಣಗಳಿದ್ದು ಕೇಂದ್ರದಲ್ಲಿ ನೀಡಬೇಕಾದ ಸೇವೆಗಳನ್ನು ಸಕಾಲದಲ್ಲಿ ಒದಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ತಿಳಿಸಿದರು.

ರಾಜ್ಯ ಮಹಿಳಾ ನಿಲಯದಲ್ಲಿ ಪ್ರಸ್ತುತ 59 ಮಾನಸಿಕ ಅಸ್ವಸ್ಥ ಮತ್ತು 14 ಬುದ್ದಿಮಾಂದ್ಯ ನಿವಾಸಿ ಒಟ್ಟು 73 ನಿವಾಸಿಗಳಿದ್ದು ಅವರಿಗೆ ಆರೈಕೆ, ಆಹಾರ, ಸಮಾಲೋಚನೆ, ವೈದ್ಯಕೀಯ ನೆರವಿನೊಂದಿಗೆ ಕೌಶಲ್ಯ ತರಬೇತಿಯನ್ನು ಸಮರ್ಪಕವಾಗಿ ನೀಡುವಂತೆ ಸೂಚಿಸಿದರು.ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ, ಗೃಹಲಕ್ಷಿö್ಮ ಯೋಜನೆ ಇತರೆ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಗುರುತಿಸಿ, ಪುನರ್ವಸತಿ ನೀಡುವಂತೆ ಸೂಚಿಸಿದ ಅವರು ಈ ಹಿಂದೆ 24 ಮಾಜಿ ದೇವದಾಸಿಯರು ಇದ್ದು 6 ಜನ ಮರಣ ಹೊಂದಿರುತ್ತಾರೆ. ಪ್ರಸ್ತುತ 18 ಮಾಜಿ ದೇವದಾಸಿಯರಿಗೆ ಸೌಲಭ್ಯ ನೀಡಲಾಗುತ್ತಿದೆ, ಹೊಸ ಸಮೀಕ್ಷೆಗೆ 4 ಅರ್ಜಿಗಳು ಬಂದಿವೆ ಎಂದರು.
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ(ತಡೆಗಟ್ಟುವಿಕೆ, ರಕ್ಷಣೆ & ಪುನರ್ವಸತಿ) 2006 ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.

ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ 262, ತಾಲ್ಲೂಕು ಮಟ್ಟದಲ್ಲಿ 07 ಮತ್ತು ಜಿಲ್ಲಾ ಮಟ್ಟದಲ್ಲಿ 01 ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಪರಿಣಾಮಕಾರಿಯಾಗಿ ಸಮಿತಿ ಸಭೆಗಳನ್ನು ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಸಹಾಯಧನ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅವರಿಗೆ ಸೌಲಭ್ಯವನ್ನು ಒದಗಿಸುವಂತೆ ತಿಳಿಸಿದರು.

2025 ರ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯ ವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಲಾಗಿದೆ. ಹಾಗೂ 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಜೊತೆಗೆ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಗೊಳಿಸಿ, ಈ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.

ಬಾಲ ಗರ್ಭಿಣಿ/ಬಾಲತಾಯಂದಿರಿಗೆ ಆರ್ಥಿಕ ಪರಿಹಾರ ಕಲ್ಪಿಸುವ ಹೊಸ ಯೋಜನೆಯಡಿ ಅಕ್ಟೋಬರ್ ರಿಂದ ಡಿಸೆಂಬರ್‌ವರೆಗೆ 28 ಸಂತ್ರಸ್ತರಿಗೆ ರೂ.6000 ದಂತೆ ಪರಿಹಾರ ಸೌಲಭ್ಯ ನೀಡಲಾಗಿದೆ. ಈ ಪ್ರಕರಣಗಳು ಕಡಿಮೆ ಆಗುವ ನಿಟ್ಟಿನಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿ.ಪಂ. ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಈ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಎನ್‌ಆರ್‌ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಎನ್‌ಆರ್‌ಸಿಗಳಲ್ಲಿ ತೀವ್ರ ಅಪೌಷ್ಟಿಕ ಮಕ್ಕಳಿಗೆ 14 ದಿನಗಳ ಕಾಲ ನಿಗದಿತ ಪೌಷ್ಟಿಕ ಆಹಾರದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಜೊತೆಗೆ ತಾಯಿಗೆ ಈ ಕುರಿತು ತರಬೇತಿ ನೀಡಲಾಗುತ್ತದೆ. ಹಲವಾರು ಪೋಷಕರು 14 ದಿನಗಳ ಕಾಲ ಕೇಂದ್ರದಲ್ಲಿ ಇರಲಾರದೇ ಚಿಕಿತ್ಸೆಯನ್ನು ಅಲ್ಲಗಳೆಯುತ್ತಿರುವುದು ಸರಿಯಲ್ಲ. ಸಂಬAಧಿಸಿದ ಅಧಿಕಾರಿಗಳು ಪೋಷಕರ ಮನವೊಲಿಸಿ ಕಡ್ಡಾಯವಾಗಿ ಚಿಕಿತ್ಸೆ ಕೊಡಿಸಬೇಕೆಂದು ಸೂಚನೆ ನೀಡಿದರು.

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಯಲ್ಲಿ ಮೊದಲ ಪ್ರಸವದ ಗರ್ಭಿಣಿಯರಿಗೆ ನೀಡುವ ರೂ.5000 ಯೋಜನೆಯಡಿ 2025 ರ ಅಂತ್ಯಕ್ಕೆ ಶೇ.114.70 ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದರೆ ನೀಡುವ ರೂ.6000 ಯೋಜನೆಯಡಿ ಶೇ.98.77 ಪ್ರಗತಿ ಸಾಧಿಸಲಾಗಿದೆ ಎಂದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಸಿಪಿಓ ಮಂಜುನಾಥ್, ಸಿಡಬ್ಲುö್ಯಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಸಾಂತ್ವನ ಕೇಂದ್ರಗಳ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Shivamogga DC instructs Anganwadi to identify site for construction of own buildings