6ನೇ ತರಗತಿ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Morarji Desai Girls Residential School Arakeri

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ : ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ “ವಿಶೇಷ ನೋಂದಣಿ ಅಭಿಯಾನ”

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

2026-27 ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಗಾಂಧಿತತ್ವ, ಏಕಲವ್ಯ ಸೇರಿದಂತೆ ಒಟ್ಟು 21 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಪ್ರಸ್ತುತ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿಗೆ ಭೇಟಿ ನೀಡಬಹುದು.ಅನ್ ಲೈನ್ ಮೂಲಕ ಹತ್ತಿರದ ವಸತಿ ಶಾಲೆ, ಕಾಲೇಜುಗಳ ಮೂಲಕ ಅರ್ಜಿ ಸಲ್ಲಿಸಲು ಫೆ.02 ಕೊನೆಯ ದಿನವಾಗಿರುತ್ತದೆ. ಪ್ರವೇಶ ಪರೀಕ್ಷೆ ಮಾ.01 ರಂದು ನಡೆಯಲಿದೆ.

Morarji Desai Girls Residential School Arakeri
Morarji Desai Girls Residential School Arakeri

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea/kreis2026 ಅಥವಾ ದೂ.08023-460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ : ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಅವರು ಹೇಳಿದರು.

ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.

ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದÀರು.ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್‌ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.

Applications invited for admission to 6th grade residential schools