ವಸತಿ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಇನ್ನಿತರ ಪರಿಕರಗಳ ಸರಬರಾಜು: ಸಚಿವ ಡಾ. ಹೆಚ್.ಸಿ.ಮಹದೇವಪ್ಪ

Dr. H.C. Mahadevappa

ಬೆಳಗಾವಿ: 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಬೇಕಾಗುವ ಡೆಸ್ಕ್ ಕಂ ಬೆಂಚ್ 5 ಸೀಟರ್, ಟು ಟೈರ್ ಕಾಟ್, ಹಾಸಿಗೆ, ದಿಂಬುಗಳು ಹಾಗೂ ಇನ್ನಿತರ ಪರಿಕರಗಳ ಸರಬರಾಜು ಆದೇಶವನ್ನು ನೀಡಲಾಗಿದೆ. ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕೊರತೆ ಕಂಡುಬಂದಲ್ಲಿ ಅನುದಾನದ ಲಭ್ಯತೆಯನುಸಾರ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹಾದೇವಪ್ಪ ಹೇಳಿದರು.

Dr. H.C. Mahadevappa
Dr. H.C. Mahadevappa

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಿರಹಟ್ಟಿ ಶಾಸPರಾದ ಡಾ. ಚಂದ್ರು ಲಮಾಣಿ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ವಿಧಾನಸಭೆಯಲ್ಲಿ ಪ್ರಸ್ತಾಪಿದ ಪ್ರಶ್ನೆಗೆ 2025-26ನೇ ಸಾಲಿನ ಆಯವ್ಯಯದಲ್ಲಿ ವಸತಿ ಶಾಲೆಗಳಿಗೆ ಮೂಲಭೂತ ಸೌಲಭ್ಯಕ್ಕೆ ಅಗತ್ಯ ಪರಿಕರಗಳನ್ನು ಒದಗಿಸುವುದರ ಜೊತೆಗೆ ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಒಟ್ಟು 26 ಹೊಸ ವಸತಿ ಶಾಲೆಗಳನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ಪ್ರಾರಂಭಿಸಲು ವಸತಿ ಶಾಲೆಗಳ ಹೆಸರು, ಪ್ರವರ್ಗವಾರು ಶಾಲೆಗಳ ವರ್ಗೀಕರಣ ಮಾಡಿ ಪ್ರತಿ ಶಾಲೆಯ ತರಗತಿವಾರು 50 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಅನುಮೋದನೆ ನೀಡಲಾಗಿದೆ. ಅದರಂತೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ 26 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Supply of infrastructure and other equipment to residential schools: Minister Dr. H.C. Mahadevappa