ಬಳ್ಳಾರಿ : ಊರು ಹಬ್ಬ, ಜಾತ್ರೆ-ಉತ್ಸವಗಳಲ್ಲಿ ಆರೋಗ್ಯದ ಕಾಳಜಿ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಸಲಹೆ

ake care of your health during village festivals, fairs and festivals DHO Dr. Yalla Rameshbabu advises
ake care of your health during village festivals, fairs and festivals DHO Dr. Yalla Rameshbabu advises

ಬಳ್ಳಾರಿ: ಸಾರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದAತೆ ಆರೋಗ್ಯ ಇಲಾಖೆಯ ಜೊತೆಗೆ ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. 

ಇದನ್ನು ಮಿಸ್‌ ಮಾಡದೇ ಓದಿ: CBSE 10 ಮತ್ತು 12 ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿ ಪರಿಷ್ಕೃತ ಬಿಡುಗಡೆ

ಗ್ರಾಮ / ಪಟ್ಟಣಗಳಲ್ಲಿ ನಡೆಯುವ ಎಲ್ಲಾ ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳಲ್ಲಿನ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಯ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಪ್ರದೇಶದಲ್ಲಿ ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು. ಅಗತ್ಯ ಔಷಧಿ ದಾಸ್ತಾನುಗಳೊಂದಿಗೆ ಕರ್ತವ್ಯ ನಿರ್ವಹಿಸಲು ವೈದ್ಯರು/ಸಿಬ್ಬಂದಿಗಳನ್ನು ನೇಮಿಸಲಾಗುವುದು. ದೊಡ್ಡ ಜಾತ್ರೆಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ಪ್ರಾರಂಭಿಸಲಾಗುವುದು. ಕ್ಲೋರೋಸ್ಕೋಪ್ ಮೂಲಕ ಕುಡಿಯುವ ನೀರನ್ನು ಪರೀಕ್ಷೆ ಮಾಡಿ ನೀರು ಕುಡಿಯಲು ಯೋಗ್ಯವಿದೆ ಎಂದು ಖಾತರಿ ಆದ ನಂತರ ನೀರು ಕುಡಿಯಲು ಸರಬರಾಜು ಮಾಡಲು ತಿಳಿಸಲಾಗುವುದು ಎಂದಿದ್ದಾರೆ.

ಇದನ್ನು ಮಿಸ್‌ ಮಾಡದೇ ಓದಿ: ರೈಹಾನ್ ವಾದ್ರಾ ಮದುವೆಯಾಗುತ್ತಿರುವ ಅವಿವಾ ಬೇಗ್ ಯಾರು

ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಗುವುದು. ಆರೋಗ್ಯ ಇಲಾಖೆಯ ಸೇವೆಗಳು ಮತ್ತು ಆರೋಗ್ಯ ಮಾಹಿತಿಯ ಕುರಿತು ಕರ ಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ನೀಡಲಾಗುವುದು. ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಮುಂಚೆಯೇ ಆ ಪ್ರದೇಶದಲ್ಲಿ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ ಜೈವಿಕ ಪರೀಕ್ಷೆಗೆ ಒಳಪಡಿಸಲಾಗುವುದು. ದುರಸ್ಥಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು ಅತೀ ಜರೂರಾಗಿ ಸರಿಪಡಿಸಿ ಗ್ರಾಮದ ಜನತೆಗೆ ಕುಡಿಯಲು ಶುದ್ಧ ಹಾಗೂ ಸ್ವಚ್ಛ ನೀರು ಸರಬರಾಜು ಮಾಡುವುದು. ಓವರ್ ಹೆಡ್ ಟ್ಯಾಂಕ್ ಅಥವಾ ಕೆರೆಯಿಂದ ಗ್ರಾಮಕ್ಕೆ ಸರಬರಾಜು ಆಗುವ ನೀರನ್ನು ಕ್ಲೋರಿನೇಷನ್ ಮಾಡಿದ ನಂತರ ಸರಬರಾಜು ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸ್ವಚ್ಚ ಹಾಗೂ ಶುದ್ಧ ಕ್ಲೋರಿನೇಷನ್ ಮಾಡಿದ ನೀರನ್ನು ನಿಗದಿತ ಸ್ಥಳಗಳಲ್ಲಿ ಟ್ಯಾಂಕರ್ ಗಳ ಮೂಲಕ ಸರಬರಾಜು ಮಾಡಲು ತಿಳಿಸಲಾಗುವುದು. ದೇವಸ್ಥಾನದ ಸುತ್ತ ಮುತ್ತಲಿನ ಆವರಣ ಪರಿಶೀಲನೆ ಮಾಡಿ ಕಸದ ವಿಲೇವಾರಿಗಾಗಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಕುರಿತು ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ತಾಲೂಕ ಪಂಚಾಯತ್, ಜಿಲ್ಲಾ ಪಂಚಾಯತಿ ಅಧಿಕಾರಿಗಳು/ಸಿಬ್ಬಂದಿಗಳು ಕ್ರಮ ವಹಿಸುವರು ಎಂದಿದ್ದಾರೆ.

ಜಾತ್ರೆಯಲ್ಲಿ ತೆರೆದಿಟ್ಟ ಸಿಹಿ ಪದಾರ್ಥ, ಕತ್ತರಿಸಿ ತೆರೆದಿಟ್ಟ ಹಣ್ಣುಗಳನ್ನು ಮುಚ್ಚಿಟ್ಟು ಮಾರಾಟ ಮಾಡದಂತೆ ಕ್ರಮ ವಹಿಸಲಾಗಿದೆ. ಜಾತ್ರೆ-ಹಬ್ಬದ ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

Bellary : Take care of your health during village festivals, fairs and festivals: DHO Dr. Yalla Rameshbabu advises