ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
ಇದನ್ನು ಮಿಸ್ ಮಾಡದೇ ಓದಿ : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಅಂಬಿಗ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುAಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kvldcl.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.
Veerashaiva Lingayat Development Corporation