ಮುಂಬೈ: ಮಹಾರಾಷ್ಟ್ರದಲ್ಲಿ ತೀವ್ರ ರಾಜಕೀಯ ನಾಟಕದ ಮಧ್ಯೆ, ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಒಪ್ಪಿಕೊಂಡಿದ್ದಾರೆ ಎಂಬ ವರದಿಗಳಿವೆ. ಸ್ಥಳೀಯ ಮಾಧ್ಯಮಗಳ ಪವಾರ್ ಅವರು ಫಡ್ನವೀಸ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಅನುಮೋದಿಸಿದ್ದಾರೆ.
ಆದಾಗ್ಯೂ, ಏಕನಾಥ್ ಶಿಂಧೆ ಶಿಬಿರದಿಂದ ಯಾವುದೇ ಹೊಸ ಮಾಹಿತಿ ಬಾರದ ಕಾರಣ ಸಸ್ಪೆನ್ಸ್ ಉಳಿದಿದೆ. ಇಂದು ನವದೆಹಲಿಯಲ್ಲಿ ನಡೆಯಲಿರುವ ಪ್ರಮುಖ ಮಹಾಯುತಿ ಸಭೆಗೆ ಮುಂಚಿತವಾಗಿ ಈ ವರದಿ ಬಂದಿದೆ. ಅಜಿತ್ ಪವಾರ್, ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ನವೆಂಬರ್ 23ರಂದು ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ 230 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 132 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಅಜಿತ್ ಪವಾರ್ ಅವರ ಎನ್ಸಿಪಿ 41 ಸ್ಥಾನಗಳನ್ನು ಗೆದ್ದರೆ, ಏಕನಾಥ್ ಶಿಂಧೆ ಅವರ ಶಿವಸೇನೆ 57 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.