Press ID & Credential Portal
Apply / Verify  ➔
Stories
Press ID
Login
LIVE TV StateNationalInternationalBusinessLifestyleJobs
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪದೇಪದೇ ಬಿಸಿ ಮಾಡಿದ ಅಡುಗೆ ಎಣ್ಣೆ ಬಳಕೆಗೆ ಬ್ರೇಕ್: ಸಾರ್ವಜನಿಕ ಆರೋಗ್ಯ ರಕ್ಷಣೆಗೆ 'ರುಕೋ' ಯೋಜನೆ ಮೂಲಕ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ

ಬೆಂಗಳೂರು :ಉಪ್ಪು ಮತ್ತು ಸಕ್ಕರೆಯ ಮಿತಿಮೀರಿದ ಬಳಕೆಗೆ ತಡೆ ನೀಡಿದ ಬೆನ್ನಲ್ಲೇ, ಇದೀಗ ಪದೇಪದೇ ಬಿಸಿ ಮಾಡಿದ ಅಡುಗೆ ಎಣ್ಣೆಯ ಮರುಬಳಕೆಯಿಂದ ಆರೋಗ್ಯದ ಮೇಲಾಗುವ ಭೀಕರ ಪರಿಣಾಮಗಳನ್ನು ನಿಯಂತ್ರಿಸಲು ರಾಜ್ಯ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಜಂಟಿಯಾಗಿ ಹೊಸ ಮಾರ್ಗಸೂಚಿಯನ್ನು ರೂಪಿಸುತ್ತಿವೆ. ಹೋಟೆಲ್, ಬೇಕರಿ ಹಾಗೂ ಮನೆಗಳಲ್ಲಿ ಒಂದೇ ಎಣ್ಣೆಯನ್ನು ಪದೇಪದೇ ಕರಿಯಲು ಬಳಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

ಹೊಸ ಮಾರ್ಗಸೂಚಿಯ ಪ್ರಕಾರ ಯಾವುದೇ ಕಾರಣಕ್ಕೂ ಅಡುಗೆ ಎಣ್ಣೆಯನ್ನು ಮೂರಕ್ಕಿಂತ ಹೆಚ್ಚು ಬಾರಿ ಬಿಸಿ ಮಾಡಿ ಬಳಸಬಾರದು. ಎಣ್ಣೆಯನ್ನು ಪದೇಪದೇ ಬಿಸಿ ಮಾಡುವುದರಿಂದ ಅದರಲ್ಲಿ ‘ಟೋಟಲ್ ಪೋಲಾರ್ ಕಾಂಪೌಂಡ್ಸ್’ (TPC) ಪ್ರಮಾಣ ಹೆಚ್ಚಾಗುತ್ತದೆ. ಈ TPC ಪ್ರಮಾಣ ಶೇಕಡಾ 25ಕ್ಕಿಂತ ಹೆಚ್ಚಾದರೆ ಅಂತಹ ಎಣ್ಣೆ ಮಾನವ ಬಳಕೆಗೆ ತೀವ್ರ ಅಪಾಯಕಾರಿಯಾಗಿದ್ದು, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕೊಲೆಸ್ಟ್ರಾಲ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿಮಾಡಿಕೊಡುತ್ತದೆ. ಎಣ್ಣೆಯಲ್ಲಿ ನೀಲಿ-ಬೂದು ಬಣ್ಣದ ಹೊಗೆ ಅಥವಾ ನೊರೆ ಕಾಣಿಸಿಕೊಂಡರೆ, ಹಾಗೂ ಎಣ್ಣೆ ಕಪ್ಪಾಗಿ ಅದರ ಗಾಢತೆ ಬದಲಾದರೆ ಅದನ್ನು ತಕ್ಷಣವೇ ತ್ಯಜಿಸಬೇಕು ಎಂದು ಸೂಚಿಸಲಾಗಿದೆ. ಒಮ್ಮೆ ಬಳಸಿದ ಎಣ್ಣೆಯನ್ನು ಕೇವಲ ಒಂದೆರಡು ದಿನಗಳಲ್ಲಿ ಮುಗಿಸಬೇಕು ಹೊರತು ದೀರ್ಘಕಾಲ ಸಂಗ್ರಹಿಸಿಡಬಾರದು. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಬೇಕರಿಗಳು ಬಳಸಿದ ಎಣ್ಣೆಯ ಸೂಕ್ತ ನಿರ್ವಹಣೆ ಮತ್ತು ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಮುಂದಿನ ದಿನಗಳಲ್ಲಿ ತಪಾಸಣೆಗಾಗಿ ಎಣ್ಣೆಯ ಬಳಕೆಯ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯವಾಗುವ ಸಾಧ್ಯತೆಯಿದೆ.

ಬಳಸಿದ ಅಡುಗೆ ಎಣ್ಣೆಯನ್ನು ಚರಂಡಿಗೆ ಸುರಿದು ಪರಿಸರ ಹಾಳು ಮಾಡುವುದನ್ನು ತಡೆಯಲು RUCO (Repurpose Used Cooking Oil) ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಹೋಟೆಲ್‌ಗಳು ಹಾಗೂ ಆಹಾರ ತಯಾರಕರು ತಮ್ಮ ಬಳಿ ಉಳಿಯುವ ಎಣ್ಣೆಯನ್ನು ಅಧಿಕೃತ RUCO ಸಂಗ್ರಹಣಾ ಸಂಸ್ಥೆಗಳಿಗೆ ನೀಡಬೇಕಾಗುತ್ತದೆ. ಗೃಹಿಣಿಯರು ಮನೆಯಲ್ಲಿ ಉಳಿಯುವ ಎಣ್ಣೆಯನ್ನು ಚರಂಡಿಗೆ ಹಾಕದೆ, ಸ್ಥಳೀಯ ವಾರ್ಡ್‌ ಮಟ್ಟದ ಸಂಗ್ರಹಣಾ ವ್ಯವಸ್ಥೆ ಮೂಲಕ ಬಯೋಗ್ಯಾಸ್ ಹಾಗೂ ಬಯೋಡೀಸೆಲ್ ಕಂಪನಿಗಳಿಗೆ ತಲುಪಿಸುವ ಯೋಜನೆ ಪ್ರಸ್ತಾವನೆಯಲ್ಲಿದೆ. ಹೋಟೆಲ್‌ಗಳಲ್ಲಿ ಎಣ್ಣೆ ಎಷ್ಟು ಬಾರಿ ಮರುಬಳಕೆಯಾಗಿದೆ ಹಾಗೂ ಹೇಗೆ ವಿಲೇವಾರಿ ಮಾಡಲಾಗುತ್ತಿದೆ ಎಂಬುದರ ದಾಖಲೆ ನಿರ್ವಹಿಸುವುದು ಕಡ್ಡಾಯವಾಗಲಿದ್ದು, ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಈ ಯೋಜನೆ ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದಲ್ಲಿ ಈಗಾಗಲೇ 2024–25 ಮತ್ತು 2025–26ನೇ ಸಾಲಿನಲ್ಲಿ ಬರೋಬ್ಬರಿ 32.68 ಲಕ್ಷ ಲೀಟರ್ ಬಳಸಿದ ಅಡುಗೆ ಎಣ್ಣೆಯನ್ನು ಸಂಗ್ರಹಿಸಿ ಪುನರ್ಬಳಕೆಗೆ ನೀಡಲಾಗಿದೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
LATEST
ಕೆಪಿಎಸ್‌ಸಿ ಅಕ್ರಮ: ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆಗೆ 5 ದಿನಗಳ ಷರತ್ತುಬದ್ಧ ಜಾಮೀನು ಮಂಜೂರುಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ: ಹೃದಯಾಘಾತಕ್ಕೆ ರಕ್ತ ಹೆಪ್ಪುಗಟ್ಟುವಿಕೆಯೇ ಕಾರಣ ಎಂದ ಮರಣೋತ್ತರ ವರದಿರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಬಿಜೆಪಿ ಮಾಜಿ ಶಾಸಕನನ್ನು ಹೊಡೆದು ಕೊಂದ ಗ್ರಾಮಸ್ಥರು25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿ. ವೈ. ವಿಜಯೇಂದ್ರ ಬಾಂಬ್!ಮೈಸೂರು ದಸರಾ: ರಾಜಪರಂಪರೆಯ ವೈಭವದ ಪ್ರತೀಕವಾದ ರತ್ನಖಚಿತ ಸಿಂಹಾಸನದ ಇತಿಹಾಸ ಮತ್ತು ರೋಚಕ ವೈಶಿಷ್ಟ್ಯಗಳುಹವಾಮಾನ ವರದಿ: ರಾಜ್ಯದಲ್ಲಿ ಮುಂಗಾರು ಕ್ಷೀಣ; ಅಕ್ಟೋಬರ್ 13ರವರೆಗೆ ಮಳೆಯಿಲ್ಲದೆ ಬಿಸಿಲು, ಒಣಹವೆ ಮುಂದುವರಿಕೆStanford–Elsevier ವಿಶ್ವದ ಅಗ್ರ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಗಣಿತ ಪ್ರಾಧ್ಯಾಪಕ ಡಾ. ಯೋಗೀಶ್ ಎನ್.ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ಸ್ಥಳಾಂತರ ತಾತ್ಕಾಲಿಕ ಸ್ಥಗಿತ: ಡಿಜಿಪಿ ಅಲೋಕ್ ಕುಮಾರ್ ನಿರ್ಧಾರಬೆಂಗಳೂರಿನಲ್ಲಿ ಅಕ್ಕಸಾಲಿಗನಿಗೆ 1.3 ಕೋಟಿ ರೂ. ವಂಚನೆ: ದೈವಿಕ ಕೃಪೆಯ ಚಿನ್ನದ ಆಸೆಗೆ ಬಿದ್ದು ಸರ್ವಸ್ವ ಕಳೆದುಕೊಂಡ ಕುಟುಂಬಶರನ್ನವರಾತ್ರಿ ವಿಶೇಷ: ದೇಶದ ಪ್ರಸಿದ್ಧ ಒಂಬತ್ತು ದೈವಿಕ ದೇವಾಲಯಗಳು ಮತ್ತು ಅವುಗಳ ಆಧ್ಯಾತ್ಮಿಕ ಮಹತ್ವ