ರೈತರಿಗೆ ಗುಡ್ ನ್ಯೂಸ್!
ಪಿಎಂ ಕಿಸಾನ್ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಪ್ರಧಾನಿ ಮೋದಿಯಿಂದ ಹಣ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಿಂದ ಅಧಿಕೃತವಾಗಿ ಪೀಎಂ-ಕಿಸಾನ್ 22ನೇ ಕಂತಿನ ನಿಧಿಯನ್ನು ಬಿಡುಗಡೆ ಮಾಡಲಿದ್ದಾರೆ.
ದೇಶಾದ್ಯಂತ ಕೋಟ್ಯಂತರ ರೈತರಿಗೆ ಲಾಭ
ಈ ಬಾರಿಯ ಕಂತಿನಲ್ಲಿ ದೇಶಾದ್ಯಂತ ಒಟ್ಟು 9.32 ಕೋಟಿಗೂ ಹೆಚ್ಚು ಅರ್ಹ ರೈತ ಕುಟುಂಬಗಳ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ.
ತಲಾ ₹2,000 ನೇರ ಜಮೆ!
ಈ ಯೋಜನೆಯಡಿ ಪ್ರತಿ ಅರ್ಹ ರೈತರ ಬ್ಯಾಂಕ್ ಖಾತೆಗೆ ತಲಾ 2,000 ರೂಪಾಯಿಗಳನ್ನು ನೇರ ಲಾಭ ವರ್ಗಾವಣೆ (DBT) ಮೂಲಕ ಜಮೆ ಮಾಡಲಾಗುತ್ತದೆ.
ಗುವಾಹಟಿಯಲ್ಲಿ ವಿಶೇಷ ಕಾರ್ಯಕ್ರಮ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಈ ನಿಧಿಯನ್ನು ಬಿಡುಗಡೆ ಮಾಡಲಿದ್ದಾರೆ.
ಬರೋಬ್ಬರಿ ₹19,000 ಕೋಟಿ!
ಈ ಬಾರಿಯ ಕಂತಿನಲ್ಲಿ ಒಟ್ಟು 19,000 ಕೋಟಿ ರೂಪಾಯಿಗಳಿಗೂ ಅಧಿಕ ನಿಧಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ.
ಸ್ಟೇಟಸ್ ಪರಿಶೀಲಿಸುವುದು ಹೇಗೆ?
ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯಲು ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್‌ಗೆ (pmkisan.gov.in) ಭೇಟಿ ನೀಡಿ ಮತ್ತು ನಿಮ್ಮ ಆಧಾರ್ ಸಂಖ್ಯೆಯನ್ನು ಬಳಸಿ
ಇ-ಕೆವೈಸಿ ಪೂರ್ಣಗೊಳಿಸಿ!
ನಿಮ್ಮ ಖಾತೆಗೆ ಯಾವುದೇ ಅಡೆತಡೆಯಿಲ್ಲದೆ ಹಣ ಬರಬೇಕೆಂದರೆ ಇ-ಕೆವೈಸಿ (e-KYC) ಪೂರ್ಣಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.