ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಮುಂಬರುವ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿದೆ.ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರು ಕ್ರೀಡಾಪಟುಗಳು ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಅವರು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.
ಮಾಧ್ಯಮ ವರದಿಗಳ ಪ್ರಕಾರ, ಪಕ್ಷದ ಕೇಂದ್ರ ಚುನಾವಣಾ ಸಮಿತಿಯು 34 ಹೆಸರುಗಳನ್ನು ಅಂತಿಮಗೊಳಿಸಿದೆ ಮತ್ತು ಇಂದು ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ. ಹಾಗೂ ಫೋಗಟ್ ಜುಲಾನಾದಿಂದ ಸ್ಪರ್ಧಿಸಲಿದ್ದಾರೆ. ಎನ್ನಲಾಗಿದೆ.
ಎಐಸಿಸಿ ಕೇಂದ್ರ ಚುನಾವಣಾ ಸಮಿತಿಯ ನಂತರ ಹರಿಯಾಣ ಚುನಾವಣೆಗೆ ಫೋಗಟ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸ್ಪಷ್ಟತೆ ನೀಡುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿತ್ತು. ಸಿಇಸಿ ಸಭೆ ಚರ್ಚಿಸಿದ 49 ಹೆಸರುಗಳಲ್ಲಿ 34 ಹೆಸರುಗಳನ್ನು ಅನುಮೋದಿಸಿದೆ ಎಂದು ಮೂಲಗಳು ತಿಳಿಸಿವೆ. ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬಹುದೇ ಎಂದು ಕೇಳಿದಾಗ, ಹರಿಯಾಣದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ದೀಪಕ್ ಬಬಾರಿಯಾ, “ಈ ಬಗ್ಗೆ ನಾಳೆ ನಿಮಗೆ ಸ್ಪಷ್ಟತೆ ಸಿಗುತ್ತದೆ” ಎಂದು ಹೇಳಿದರು.
ಇಬ್ಬರು ಕುಸ್ತಿಪಟುಗಳು ದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದಲ್ಲಿ ಫೈನಲ್ ತಲುಪಿದ್ದ ಫೋಗಟ್, ಚಿನ್ನದ ಪದಕ ಪಂದ್ಯದ ದಿನದಂದು ಅಧಿಕ ತೂಕದಿಂದಾಗಿ ಅನರ್ಹಗೊಂಡಿದ್ದರು. ಅವರು 2023 ರಲ್ಲಿ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು.
ಬಿಷ್ಣೋಯ್ ಸಮುದಾಯದ ಶತಮಾನಗಳಷ್ಟು ಹಳೆಯ ಹಬ್ಬವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಅಕ್ಟೋಬರ್ 1 ರಿಂದ ಅಕ್ಟೋಬರ್ 5 ಕ್ಕೆ ಮುಂದೂಡಿತ್ತು.